ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅನುಭವಿ ಹಿರಿಯ ಬ್ಯಾಟರ್ ಕೇನ್ ವಿಲಿಯಮ್ಸನ್, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ.
ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಕಳೆದ 15 ವರ್ಷಗಳಿಂದ ನ್ಯೂಜಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.
ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಜಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಇದನ್ನೂ ಓದಿ : ಭಾರತ ತಂಡಕ್ಕೆ ಮರಳಲು ಆಯ್ಕೆಗಾರರಿಗೆ ಬಲವಾದ ಸಂದೇಶ ರವಾನಿಸಿದ ಕರುಣ್ ನಾಯರ್



















