ನವದೆಹಲಿ : ಡಿಸೆಂಬರ್ 1ರಿಂದ 19ರವರೆಗೆ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ಹಂಚಿಕೊಂಡಿದ್ದಾರೆ.
ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1, 2025ರಿಂದ ಡಿಸೆಂಬರ್ 19, 2025 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ರಿಜಿಜು ಪೋಸ್ಟ್ ಮಾಡಿದ್ದಾರೆ.
ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನ ಎದುರು ನೋಡುತ್ತಿದ್ದೇನೆ’ ಎಂದು ಅವರು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ‘ಕಾಂತಾರ ಚಾಪ್ಟರ್-1’ ಚಿತ್ರತಂಡಕ್ಕೆ ಸಕ್ಸಸ್ ಪಾರ್ಟಿ ನೀಡಿದ ಹೊಂಬಾಳೆ ಫಿಲ್ಮ್ಸ್



















