ಮೈಸೂರು: ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ವಿಪ್ರೊದಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣದ ಕನಸು ನನಸು ಮಾಡುವುದಕ್ಕಾಗಿ ವಿಪ್ರೋ ಕನ್ಸ್ಯೂಮರ್ ಕೇರ್ ಪ್ರೈವೇಟ್ ಲಿಮಿಟೆಡ್ ವಿದ್ಯಾರ್ಥಿವೇತನ ಕಾರ್ಯಕ್ರಮ ಪ್ರಾರಂಭಿಸಿದೆ. ಈ ಕಾರ್ಯಕ್ರಮದಡಿ 1.5 ಸಾವಿರ ವಿದ್ಯಾರ್ಥಿಗಳಿಗೆ ರೂ.10 ಕೋಟಿ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿನ 380 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,500 ವಿದ್ಯಾರ್ಥಿಗಳಿಗೆ ಧನಸಹಾಯ ಮಾಡಲು ಕಂಪನಿ ಮುಂದಾಗಿದೆ.
ವಿದ್ಯಾರ್ಥಿ ವೇತನವನ್ನು ಅರ್ಹತೆಯ ಮೇಲೆ ನೀಡಲಾಗುವುದಿಲ್ಲ. ಬದಲಾಗಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಸಕ್ತ ಬಡ ವಿದ್ಯಾರ್ಥಿನಿಯರು ಮೊದಲ ಆದ್ಯತೆ ನೀಡಲಾಗುತ್ತದೆ.
ಆಸಕ್ತರು ಸಂತೂರ್ ಸ್ಕಾಲರ್‌ಶಿಪ್ ವೆಬ್‌ಸೈಟ್ (www.santoorscholarships.com) ಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ವಿದ್ಯಾರ್ಥಿವೇತನ ಪಡೆಯಲು ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 2 ಸಾವಿರ ರೂ. ನಂತೆ ಮೂರು ವರ್ಷ ಅಥವಾ ಕೋರ್ಸ್ ಮುಗಿಯುವವರೆಗೆ ವರ್ಷಕ್ಕೆ 24 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಸಿಗಲಿದೆ. ಸ್ಕಾಲರ್ ಶಿಪ್ ಹಣ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಅರ್ಜಿ ಸಲ್ಲಿಸಸು ಸೆ. 20 ಕೊನೆಯ ದಿನವಾಗಿದೆ.