ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳ ನಡೆದು ಪರಸ್ಪರ ಬಡಿದಾಡಿಕೊಂಡಿದ್ದು, ಘಟನೆಯಲ್ಲಿ ವಧು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿದ್ದ ವಧುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವರನ ಸ್ಥಿತಿ ಗಂಭೀರವಾಗಿದೆ. ವಧು ಲಿಖಿತಾಶ್ರೀ ಹಾಗೂ ನವೀನ್ ಬುಧವಾರ ಮದುವೆಯಾಗಿದ್ದರು. ಆದರೆ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಇಬ್ಬರೂ ರೂಮ್ ಗೆ ಹೋಗಿ ಬಡಿದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತಾಶ್ರೀ ಸಾವನ್ನಪ್ಪಿದ್ದಾಳೆ. ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ದುರದೃಷ್ಟವಶಾತ್ ವಧು ಲಿಖಿತಾಶ್ರೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಂಭೀತವಾಗಿ ಗಾಯಗೊಂಡಿರುವ ವರ ನವೀನ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.
ಆದರೆ, ಯಾವ ಕಾರಣಕ್ಕೆ ಇಬ್ಬರೂ ಜೀವ ಹೋಗುವವರೆಗೂ ಬಡಿದಾಡಿಕೊಂಡಿದ್ದಾರೆ ಎಂಬುವುದು ಮಾತ್ರ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಕಡೆಯ ಕುಟುಂಬಸ್ಥರಿಗೆ ಇದೊಂದು ಘಟನೆ ಶಾಕ್ ನೀಡಿದೆ.