ದಾವಣಗೆರೆ: ಪರಪುರುಷನೊಂದಿಗೆ ಅನ್ಯಧರ್ಮೀಯ ಮಹಿಳೆಯೊಬ್ಬರು ಇದ್ದರು ಎಂಬ ಕಾರಣಕ್ಕೆ ಧರ್ಮಾಂಧರು ನಡುರಸ್ತೆಯಲ್ಲಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ತಾವರೆಕೆರೆಯಲ್ಲಿ (Tavarekere) ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ದೂರು ನೀಡಿದ್ದಾರೆ.
ಸಂತ್ರಸ್ತೆ ಹಾಗೂ ಫಯಾಜ್ ಎಂಬುವವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹ್ಮದ್ ನಯಾಜ್ (32), ಮಹ್ಮದ್ ಗೌಸ್ ಪೀರ್ (45), ಚಾಂದ್ ಪೀರ್(35), ಇನಾಯಿತ್ ಉಲ್ಲಾ(51), ದಸ್ತಗೀರ್(24) ಹಾಗೂ ರಸೂಲ್ ಟಿಆರ್ (42) ಬಂಧಿತ ಆರೋಪಿಗಳು. ಹಗ್ಗ, ದೊಣ್ಣೆ, ಕಬ್ಬಿಣದ ಪೈಪ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.