ಬೆಂಗಳೂರು : ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪುಷ್ಪಾವತಿ (33) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ ಜೀವತ್ಯಾಗಕ್ಕೆ ಯತ್ನಿಸಿದ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಮಹಿಳೆ ಡೆತ್ ನೋಟ್ ಬರೆದಿದ್ದು, ನಂತರ ಅದನ್ನು ಹರಿದು ಹಾಕಿರುವುದಾಗಿ ತಿಳಿದುಬಂದಿದೆ. ಡೆತ್ ನೋಟ್‌ನಲ್ಲಿ ಸ್ಥಳೀಯ ಮುಖಂಡನ ಕಿರುಕುಳ ಕುರಿತು ಆರೋಪ ಮಾಡಿದ್ದಾಗಿ ಹೇಳಲಾಗುತ್ತಿದೆ.
ಘಟನೆಯ ಬಳಿಕ ಮಹಿಳೆಯನ್ನು ತಕ್ಷಣ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮಾಡಿದ ಆರೋಪಗಳ ಬಗ್ಗೆ ಪೊಲೀಸರು ಮುಂದುವರಿದ ತನಿಖೆ ನಡೆಸುತ್ತಿದ್ದಾರ
ಇದನ್ನೂ ಓದಿ : ಹುಲಿಕಲ್ ಘಾಟ್ ದುರಂತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ!


















