ಬೆಂಗಳೂರು: ಲೀಸ್‌ಗೆ ಮನೆಯನ್ನು ಕೊಡಿಸುವುದಾಗಿ ಹೇಳಿ 5 ಲಕ್ಷ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ವಂಚನೆ ಮಾಡಿದ ವ್ಯಕ್ತಿಯ ಮೇಲೆ ದೂರು ನೀಡಿದರೂ ಪೊಲೀಸರು ಕ್ರಮ ತಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಅಬ್ದುಲ್ ಹಸನ್ ಎಂಬಾತನ ವಿರುದ್ದ ವಂಚನೆ ಆರೋಪ ಕೇಳಿ ಬಂದಿದ್ದು, ವಂಚನೆ ಮಾಡಿದ ವ್ಯಕ್ತಿಯ ಮೇಲೆ ದೂರು ಕೊಟ್ಟರೂ ಡಿಜೆ ಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ದೂರುದಾರ ಮಹಿಳೆ ಕಮಿಷನರ್ ಕಚೇರಿಗೆ ಬಂದು ದೂರು ನೀಡಿದ್ದಾಳೆ.

ಯಾವುದೋ ಮನೆ ತೋರಿಸಿ ಲೀಸ್‌ಗೆ ಕೊಡುವುದಾಗಿ ನಂಬಿಸಿ ಐದು ಲಕ್ಷ ಪಡೆದು ಇಲ್ಲಿಯವರೆಗೂ ನೀಡಿಲ್ಲ. ಹಣ ವಾಪಸ್ಸು ಕೇಳಿದರೆ ಅಬ್ದುಲ್ ಹಸನ್ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾನೆ. ಇದೇ ರೀತಿಯೇ ಸಾಕಷ್ಟು ಜನರಿಗೆ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಈ ಹಿನ್ನಲೆ ಮಹಿಳೆ, ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾಳೆ. ನಂತರ ಎಫ್ ಐಆರ್ ದಾಖಲಿಸಿಕೊಂಡ ಡಿಜೆ ಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಮೆಜೆಸ್ಟಿಕ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!



















