ಬೆಂಗಳೂರು: ಟಿಪ್ಪರ್ ಲಾರಿಗೆ ಪೌರ ಕಾರ್ಮಿಕ ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ.
ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಶ್ರೀರಾಂಪುರ ನಿವಾಸಿ ಸರೋಜಮ್ಮ (51) ಸಾವನ್ನಪ್ಪಿದ್ದಾರೆ. ಸರೋಜಮ್ಮ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಶಿವನಹಳ್ಳಿ ಸಿಗ್ನಲ್ ಬಳಿ ಈ ಘಟನೆ ನಡೆದಿದೆ.
ಬೆಳಗ್ಗೆ 6.30ಕ್ಕೆ ಕೆಲಸಕ್ಕೆ ಹಾಜರಾಗಲು ಹೋಗುತ್ತಿದ್ದ ವೇಳೆ ಸರೋಜಮ್ಮಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಬಿಎಪಿ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಸೇರಿದ್ದಾರೆ.



















