ಹಾಸನ : ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ನ್ಯಾಯ ಒದಗಿಸಬೇಕು ಎಂದು ಪ್ರತಿಭಟನೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಕಾಡಾನೆ ಹಾವಳಿಗೆ ವಿವಿಧ ಸಂಘಟನೆಗಳು ಸತ್ತವರ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಬೇಕು, ಸರಿಯಾದ ನ್ಯಾಯ ಒದಗಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ.
ಆಲೂರು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಪ್ರತಿಭಟನಾಕಾರರಿಗೆ ಸಾಥ್ ನೀಡಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ ಡಿಎಫ್‌ಓ ಸೌರಭ್ ಕುಮಾರ್ ಭೇಟಿ ನೀಡಿದ್ದಾರೆ.
ಇದನ್ನೂ ಓದಿ : ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ



















