ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಕೂಡ ಮಹಿಳೆಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶೋಭಾ (42) ಹೃದಯಾಘಾತದಿಂದ ಸಾವನ್ನಪ್ಪಿರುವ ಮಹಿಳೆ. ಶೋಭಾ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.