ಬೆಂಗಳೂರು: ಗಂಡನಿಗೆ ಭೀಮನ ಅಮಾವಾಸ್ಯೆ ಪೂಜೆ ಮಾಡಿದ ಬಳಿಕ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದಾಸನಪುರದ ಅಂಚೆಪಾಳ್ಯದಲ್ಲಿನಡೆದಿದೆ.
ಸ್ಪಂದನಾ (24) ಸಾವನ್ನಪ್ಪಿದ ಮಹಿಳೆ. ಬೆಂಗಳೂರಿನ ಕಾಲೇಜಿನಲ್ಲಿ ಪಿಜಿ ಓದುವಾಗ ಕನಕಪುರದ ಕರಿಕಲ್ಲ ದೊಡ್ಡಿ ನಿವಾಸಿ ಅಭಿಷೇಕ್ ಮತ್ತು ಸ್ಪಂದನಾ ಪರಿಚಯವಾಗಿತ್ತು.
ನಂತರ 2024 ರಲ್ಲಿ ಕನಕಪುರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆ ಮಾಡಿಕೊಂಡಿದ್ದರು.
ಪ್ರೀತಿಸಿ ಮದುವೆಯಾಗಿದ್ದ ಜೋಡಿ ಅಂಚೆಪಾಳ್ಯದಲ್ಲಿ ವಾಸವಿದ್ದರು. ಸ್ಪಂದನಾ ನಿನ್ನೆ ಭೀಮನ ಅಮಾವಾಸ್ಯೆ ಪ್ರಯುಕ್ತ ಗಂಡನಿಗೆ ಪಾದಪೂಜೆ ಮಾಡಿ ಆ ಬಳಿಕ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಬಳಿಕ ಸ್ಥಳೀಯರು ಮಹಿಳೆ ಪೋಷಕರಿಗೆ ವಿಚಾರ ಮುಟ್ಟಿಸಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪದ ಮೇಲೆ ಗಂಡ ಅಭಿಷೇಕ್ ಹಾಗೂ ಆತನ ತಾಯಿ ಲಕ್ಷ್ಮಮ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.



















