ಬೆಂಗಳೂರು: ನಗರದಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಅಸಮರ್ಪಕ ರಸ್ತೆ, ಗುಂಡಿಗಳಿಂದಾಗಿ ಜನರು ಹೈರಾಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯೋರ್ವರು ಬಿಬಿಎಂಪಿಗೆ ಲೀಗಲ್ ನೋಟಿಸ್ ನೀಡಿದ್ದಾರೆ.
ಹಾಳಾದ ರಸ್ತೆ, ಗುಂಡಿಗಳಿಂದಾಗಿ ದೈಹಿಕ ಹಾಗೂ ಮಾನಸಿಕ ತೊಂದರೆಯಾಗುತ್ತಿದೆ. ರಸ್ತೆ ಗುಂಡಿಯಲ್ಲಿ ಸಂಚರಿಸಿದ ಹಿನ್ನೆಲೆಯಲ್ಲಿ ದೇಹದಲ್ಲಿ ನೋವು ಕಾಣಿಸಿಕೊಂಡಿದ್ದು, ನಾಲ್ಕೈದು ಬಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇನೆ. ಇದರಿಂದಾಗಿ ಮಾನಸಿಕವಾಗಿ ತೊಂದರೆಯಾಗಿದೆ. ಹೀಗಾಗಿ 50 ಲಕ್ಷ ರೂ. ಪರಿಹಾರ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ನಾನು ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಿರುವ ನಾಗರಿಕೆಯಾಗಿದ್ದು, ಬಿಬಿಎಂಪಿ ನನಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಲಾಯರ್ ಮೂಲಕ ದಿವ್ಯಾ ಕಿರಣ್ ಎಂಬುವವರು ನೋಟಿಸ್ ನೀಡಿದ್ದಾರೆ.