ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮೀನು ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಲಂಬಾಣಿ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲವರು ಥಳಿಸಿದ್ದಾರೆ ಎನ್ನಲಾಗಿದೆ. ಒಂದು ಬುಟ್ಟಿ ಮೀನು ಕದ್ದಿದ್ದಾರೆಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಒಂದು ಬುಟ್ಟಿ ಮೀನು ಕದ್ದಿರುವುದು ನಿಜವೇ ಆಗಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಕಳ್ಳತನವನ್ನು ಪರಿಶೀಲಿಸಿ ಶಿಕ್ಷೆ ವಿಧಿಸುವುದಕ್ಕೆ ಪೊಲೀಸರು ಹಾಗೂ ನ್ಯಾಯಾಲಯವಿದೆ. ಆದರೆ ಹೀಗೆ ಸಾರ್ವಜನಿಕವಾಗಿ ಮರಕ್ಕೆ ಕಟ್ಟಿ ಥಳಿಸಿರುವುದು ಎಷ್ಟು ಸರಿ? ಎಂದು ಪ್ರಜ್ಞಾವಂತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.