ಬೆಂಗಳೂರು: ನಗರದಲ್ಲಿ ಅನುಮಾನಾಸ್ಪದವಾಗಿ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜೀವ್ ಗಾಂಧಿ ಲೇ ಔಟ್ 7th ಸೆಕ್ಟರ್ ಬಳಿ ಮೃತದೇಹ ಪತ್ತೆಯಾಗಿದೆ.
ವಿಜಯಲಕ್ಷ್ಮೀ (60) ಶವವಾಗಿ ಪತ್ತೆಯಾಗಿರುವ ಮಹಿಳೆ ಎನ್ನಲಾಗಿದೆ. ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.