ರಾಯಚೂರು : ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ಕಳೆದ ವರ್ಷ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ಆರೋಪಿ ದೇವರಾಜ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ |
ಮೃತ ಮಹಿಳೆ ಪತಿ ಮರಣ ನಂತರ ತವರು ಮನೆ ಯರಡೋಣದಲ್ಲಿ ವಾಸವಾಗಿದ್ದರು. ಈ ವೇಳೆ ಸಲುಗೆ ಬೆಳೆಸಿಕೊಂಡು ದೇವರಾಜ, ಅಕ್ರಮ ಸಂಬಂಧ ಹೊಂದಿದ್ದ. 2024ರ ಮಾ.10ರಂದು ಅಮವಾಸ್ಯೆ ಹಿನ್ನೆಲೆ ಇಬ್ಬರು ಜೊತೆಯಲ್ಲಿ ಛತ್ತರ ಹನುಮಪ್ಪ ದೇವಸ್ಥಾನಕ್ಕೆ ಹೋಗಿದ್ದರು. ಗ್ರಾಮಕ್ಕೆ ಮರಳುವಾಗ ಲಿಂಗಸುಗೂರಿನಲ್ಲಿ ಹಳ್ಳದ ದಂಡೆಯ ಪೊದೆಯಲ್ಲಿ ತನ್ನ ಜೊತೆ ಮಲಗಲು ಸಹಕರಿಸದಿದ್ದಕ್ಕೆ ಆರೋಪಿ ಮಹಿಳೆಯನ್ನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!



















