ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಮ್ಮೇನತ್ತ ಗ್ರಾಮದ ಬಳಿ ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಹಾಗೂ ಚಿನ್ನದ ಒಡವೆಗಳನ್ನು ಕಳವು ಮಾಡಿದ ಘಟನೆ ನಡೆದಿದೆ.
ಕಾಂತಮ್ಮ ಎಂಬ ಮಹಿಳೆ ಧರಿಸಿದ್ದ ಚಿನ್ನದ ಸರ ಮತ್ತು ಓಲೆಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಳುವಾದ ಒಡವೆಗಳ ಒಟ್ಟು ಮೌಲ್ಯ ಸುಮಾರು 2.50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮಾಹಿತಿಯ ಪ್ರಕಾರ, ಕಾಂತಮ್ಮ ಜಮೀನಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಈ ಕೃತ್ಯ ಎಸಗಿದ್ದಾರೆ. ಘಟನೆ ಬಳಿಕ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಲಾರ ಎಸ್‌ಪಿ ಕನಿಕಾ ಸಿಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.



















