ಬೆಳಗಾವಿ : ಯರಗಟ್ಟಿ ತಾಲ್ಲೂಕಿನ ತಲ್ಲೂರ ಗ್ರಾಮದಲ್ಲಿ ನೂರಾರು ಮಹಿಳೆಯರು ವಿರೇಶ್ ವೈನ್ ಶಾಪ್ ಮುಂದೆ ಪ್ರತಿಭಟನೆ ನಡೆಸಿ ಅಂಗಡಿಯನ್ನು ತಕ್ಷಣ ಬಂದ್ ಮಾಡಲು ಆಗ್ರಹಿಸಿದ್ದಾರೆ.
ಸ್ಥಳೀಯ ಮಹಿಳೆಯರು ಮನೆಯಲ್ಲಿ ಮಕ್ಕಳು ಮದ್ಯವ್ಯಸನಕ್ಕೆ ಅಂಟಿಕೊಳ್ಳುವ ಭೀತಿಯನ್ನು ವ್ಯಕ್ತಪಡಿಸಿ, ಇಡೀ ದಿನ ದುಡಿದ ಹಣವು ಮದ್ಯ ಕುಡಿತದ ಚಟಕ್ಕೆ ಒಳಗಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮದವರು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಮದ್ಯದ ಅಂಗಡಿಯನ್ನು ಬಂದ್ ಮಾಡಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ | ವಿಜಯೇಂದ್ರ



















