ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

April 16, 2026
Share on WhatsappShare on FacebookShare on Twitter

ನವದೆಹಲಿ : ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇಂದು ಸಂಸತ್‌ನ ವಿಶೇಷ ಅಧಿವೇಶನದಲ್ಲಿ ಮಂಡಿಸಿರುವ 3 ಪ್ರಮುಖ ಮಸೂದೆಗಳು ಭಾರೀ ಚರ್ಚೆ ಹಾಗೂ ಸಂಘರ್ಷಕ್ಕೆ ಕಾರಣವಾಗುವ ಲಕ್ಷಣ ಗೋಚರಿಸುತ್ತಿದೆ.

ಈ ಮಸೂದೆಗಳು ಕೇವಲ ಮಹಿಳಾ ಮೀಸಲಾತಿಗೆ ಮಾತ್ರ ಸೀಮಿತವಾಗಿರದೆ, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ, ಜನಗಣತಿ ಆಧಾರಿತ ಸೀಟು ಹಂಚಿಕೆ ಮತ್ತು ಒಕ್ಕೂಟ ವ್ಯವಸ್ಥೆಯ ಸಮತೋಲನದಂತಹ ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಚಾರಗಳನ್ನು ಒಳಗೊಂಡಿರುವುದು ವಿರೋಧ ಪಕ್ಷಗಳು ಮತ್ತು ಸಂವಿಧಾನ ತಜ್ಞರ ಆತಂಕಕ್ಕೆ ಕಾರಣವಾಗಿದೆ.

3 ಪ್ರಮುಖ ಮಸೂದೆಗಳ ಸ್ವರೂಪ ಮತ್ತು ಉದ್ದೇಶ

ಮೊದಲನೆಯದ್ದು ಸಾಂವಿಧಾನಿಕ ತಿದ್ದುಪಡಿ ಮಸೂದೆ. ಇದು ಲೋಕಸಭೆಯ ಒಟ್ಟು ಸದಸ್ಯರ ಬಲವನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಹೊಂದಿದೆ. ಇದರಲ್ಲಿ 815 ಸದಸ್ಯರು ರಾಜ್ಯಗಳಿಂದ ನೇರವಾಗಿ ಆಯ್ಕೆಯಾದರೆ, ಉಳಿದ 35 ಸ್ಥಾನಗಳನ್ನು ಕೇಂದ್ರಾಡಳಿತ ಪ್ರದೇಶಗಳಿಗೆ ಮೀಸಲಿಡುವ ಉದ್ದೇಶವಿದೆ. ಇದರ ಜೊತೆಗೆ, ರಾಜ್ಯಗಳ ಜನಸಂಖ್ಯೆಗೆ ಅನುಗುಣವಾಗಿ ವಿಧಾನಸಭೆಗಳ ಸ್ಥಾನಗಳ ಸಂಖ್ಯೆಯನ್ನು ಪರಿಷ್ಕರಿಸುವ ಪ್ರಸ್ತಾಪವೂ ಇದರಲ್ಲಿದೆ.

2ನೇ ಮಸೂದೆಯು ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ ಹಾಗೂ ದೆಹಲಿ ಕಾಯ್ದೆಗಳಿಗೆ ತಿದ್ದುಪಡಿ ತಂದು ಆಯಾ ಪ್ರದೇಶಗಳಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆಗೆ ಅವಕಾಶ ಮಾಡಿಕೊಡಲಿದೆ.

ಇನ್ನು 3ನೇ ಮಸೂದೆಯು, ಈ ಸಂಪೂರ್ಣ ಪ್ರಕ್ರಿಯೆಯನ್ನು ನಿರ್ವಹಿಸಲು ಹೊಸ ಡಿಲಿಮಿಟೇಶನ್(ಮರುವಿಂಗಡಣಾ ಆಯೋಗ) ಆಯೋಗವನ್ನು ರಚಿಸಲು ಪ್ರಸ್ತಾಪಿಸುತ್ತದೆ. ಈ 850 ಸ್ಥಾನಗಳ ಲೆಕ್ಕಾಚಾರ ಹೇಗೆ ಬಂತು ಮತ್ತು ಅವುಗಳನ್ನು ರಾಜ್ಯಗಳಿಗೆ ಹೇಗೆ ಹಂಚಿಕೆ ಮಾಡಲಾಗುತ್ತದೆ ಎಂಬ ಬಗ್ಗೆ ವಿರೋಧ ಪಕ್ಷಗಳು ತೀವ್ರ ಪ್ರಶ್ನೆಗಳನ್ನು ಎತ್ತುತ್ತಿವೆ.

ಮಹಿಳಾ ಮೀಸಲಾತಿ ತಕ್ಷಣ ಜಾರಿಯಾಗುತ್ತದೆಯೇ?

ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡರೂ ಅದು ತಕ್ಷಣವೇ ಜಾರಿಗೆ ಬರುವುದಿಲ್ಲ ಎಂಬುದೇ ಇಲ್ಲಿನ ಪ್ರಮುಖ ಅಂಶ. ಉದ್ದೇಶಿತ 334ಎ ವಿಧಿಯ ತಿದ್ದುಪಡಿಯ ಪ್ರಕಾರ, ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ. ಇದೇ ಕಾರಣಕ್ಕೆ ಮಹಿಳಾ ಸಂಘಟನೆಗಳು, ಸಂಸದರು ಹಾಗೂ ಕಾನೂನು ತಜ್ಞರು, ಜನಸಂಖ್ಯೆಯ ಏರಿಳಿತಗಳಿಗೂ ಶೇ.33ರಷ್ಟು ನಿಗದಿತ ಮೀಸಲಾತಿಗೂ ಸಂಬಂಧವಿಲ್ಲದಿರುವುದರಿಂದ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯನ್ನು ಮೀಸಲಾತಿಯಿಂದ ಪ್ರತ್ಯೇಕಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಜಾರಿಯಾದ ದಿನದಿಂದ 15 ವರ್ಷಗಳ ಕಾಲ ಈ ಮೀಸಲಾತಿ ಅಸ್ತಿತ್ವದಲ್ಲಿರಲಿದ್ದು, ಪರ್ಯಾಯ (ರೊಟೇಶನ್) ಆಧಾರದ ಮೇಲೆ ಮಹಿಳೆಯರಿಗೆ, ಅದರಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಸ್ಥಾನಗಳನ್ನು ಹಂಚಿಕೆ ಮಾಡಲಾಗುತ್ತದೆ.

ಜನಗಣತಿ ಮತ್ತು ಪ್ರಾತಿನಿಧ್ಯದ ವಿವಾದ

ಈ ಪ್ರಕ್ರಿಯೆಯಲ್ಲಿ ಯಾವ ವರ್ಷದ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ ಎಂಬುದು ಸದ್ಯದ ಅತಿ ದೊಡ್ಡ ವಿವಾದ. ಸಂವಿಧಾನದ 81ನೇ ವಿಧಿಯ ಪ್ರಕಾರ ಲೋಕಸಭಾ ಸ್ಥಾನಗಳನ್ನು ಜನಸಂಖ್ಯೆಯ ಆಧಾರದ ಮೇಲೆ ಹಂಚಿಕೆ ಮಾಡಲಾಗುತ್ತದೆ. ಆದರೆ, 2001 ಮತ್ತು 2003ರ ತಿದ್ದುಪಡಿಗಳ ಮೂಲಕ 1971ರ ಜನಗಣತಿಯ ಆಧಾರದ ಮೇಲಿದ್ದ ಸೀಟುಗಳ ಹಂಚಿಕೆಯನ್ನು 2026ರ ನಂತರದ ಮೊದಲ ಜನಗಣತಿಯವರೆಗೆ ಯಥಾಸ್ಥಿತಿಯಲ್ಲಿ (ಫ್ರೀಜ್) ಇರಿಸಲಾಗಿತ್ತು. ಇದೀಗ ಹೊಸ ಮಸೂದೆಯು ಈ ನಿರ್ಬಂಧವನ್ನು ಸಡಿಲಿಸಿ, ಸಂಸತ್ತು ನಿರ್ಧರಿಸುವ ಯಾವುದೇ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡಲು ಅವಕಾಶ ಕಲ್ಪಿಸುತ್ತದೆ. ಇದು 2011ರ ಜನಗಣತಿಯನ್ನು ಬಳಸಲಾಗುತ್ತದೆಯೋ ಅಥವಾ ಹೊಸ ದತ್ತಾಂಶವನ್ನು ಆಧರಿಸಲಾಗುತ್ತದೆಯೋ ಎಂಬ ಗೊಂದಲವನ್ನು ಸೃಷ್ಟಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಆತಂಕವೇಕೆ?

ಜನಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ಈ ಹೊಸ ಪ್ರಾತಿನಿಧ್ಯದ ಲೆಕ್ಕಾಚಾರ ನುಂಗಲಾರದ ತುತ್ತಾಗಿದೆ. ಜನಸಂಖ್ಯಾ ಸ್ಫೋಟವನ್ನು ಯಶಸ್ವಿಯಾಗಿ ತಡೆದ ರಾಜ್ಯಗಳು ಸಂಸತ್ತಿನಲ್ಲಿ ತಮ್ಮ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದರೆ, ಜನಸಂಖ್ಯೆ ಹೆಚ್ಚಿರುವ ರಾಜ್ಯಗಳು ಹೆಚ್ಚಿನ ಸೀಟುಗಳನ್ನು ಪಡೆಯುವ ಸಾಧ್ಯತೆಯಿದೆ. ಇದು ರಾಜ್ಯಗಳ ರಾಜಕೀಯ ಚೌಕಾಸಿಯ ಶಕ್ತಿಯನ್ನು ಕುಗ್ಗಿಸಲಿದೆ ಮತ್ತು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗಲಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಹಲವು ನಾಯಕರು, ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದರ ವಿರುದ್ಧ ಎಚ್ಚರಿಕೆ ನೀಡಿದ್ದು, ವಿರೋಧ ಪಕ್ಷಗಳು ತಾವು ಮಹಿಳಾ ಮೀಸಲಾತಿ ಪರವಾಗಿದ್ದೇವೆ, ಆದರೆ ಕ್ಷೇತ್ರ ಪುನರ್ವಿಂಗಡಣೆಯ ವಿರುದ್ಧವಾಗಿದ್ದೇವೆ ಎಂಬ ನಿಲುವನ್ನು ಸ್ಪಷ್ಟಪಡಿಸಿವೆ.

ಇದನ್ನೂ ಓದಿ : GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

Tags: IndiaKarnataka News beat
SendShareTweet
Previous Post

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

Next Post

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

Related Posts

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

Next Post
ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಿಡಿದೆದ್ದ ಸ್ಟಾಲಿನ್ - ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat