ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಈ ಪ್ರತಿಭಟನೆ ಕೇವಲ ಫೋಟೋ ಫೋಸ್ ಗೆ ಸೀಮಿತವಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ಸಿ.ಟಿ. ರವಿ ಬಳಸಿದ ಪದ ಬಳಕೆಯನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿತ್ತು. ಈ ಸಂದರ್ಭದಲ್ಲಿ ಸೌಮ್ಯರೆಡ್ಡಿ ಸೇರಿದಂತೆ ಕೈ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಪ್ರತಿಭಟನೆಗೆಂದು ಆಗಮಿಸಿದ ಕೈ ಮಹಿಳಾ ಕಾಂಗ್ರೆಸ್ ಸದಸ್ಯರ ಮತ್ತೊಂದು ತಂಡ, ಬಿಜೆಪಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೆಡ್ ಮುಂದೆ ನಿಂತು ಪೋಟೋಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗೆ ಪೋಸ್ ಕೊಟ್ಟ ಮಹಿಳಾ ತಂಡ ಮರಳಿ ಹೋಗಿದೆ. ಇದನ್ನು ಕಂಡು ಹಲವರು ನಗಾಡುತ್ತಿದ್ದಾರೆ.