ಚಿಕ್ಕಬಳ್ಳಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ವುಡ್ ವರ್ಕ್ ಅಂಗಡಿ ಭಸ್ಮವಾಗಿರುವ ಘಟನೆ ಚಿಂತಾಮಣಿ ನಗರದ ಚೇಳೂರು ರಸ್ತೆಯಲ್ಲಿ ನಡೆದಿದೆ.
ಸುಮಾರು 12 ಲಕ್ಷ ಬೆಲೆ ಬಾಳುವ ಮರದ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿವೆ. ಆರಪ್ಪ ಎಂಬವರಿಗೆ ಸೇರಿದ ವುಡ್ ವರ್ಕ್ ಅಂಗಡಿ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಹೊತ್ತಿರುವ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.