ಶಿವಮೊಗ್ಗ: ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆತನ ಸಹೋದರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ
ಸಿದ್ಲೀಪುರ ಗ್ರಾಮದ ಮಂಜು (35) ಮೃತ ವ್ಯಕ್ತಿ. ಕಟ್ಟಡ ನಿರ್ಮಾಣಕ್ಕೆ ಬಳಕೆಯಾಗಿದ್ದ ತಾತ್ಕಾಲಿಕ ಕಟ್ಟಡ ಕೆಡವಲು ಮಂಜು ಮತ್ತು ಆತನ ಸಹೋದರ ಮುತ್ತು ಮುಂದಾಗಿದ್ದರು. ಈ ವೇಳೆ, ಸಮುಚ್ಚಾಯ ಕಟ್ಟಡದ ಒಂದು ಭಾಗದ ಗೋಡೆ ದಿಢೀರನೆ ಕುಸಿದು ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಮಂಜು ಸ್ಥಳದಲ್ಲೇ ಸಾವನ್ನಪ್ಪಿದರೆ, ಆತನ ಸಹೋದರ ಮುತ್ತು ಕೈ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಮುತ್ತುವನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ನಾಳೆ ಆಂಧ್ರ, ಒಡಿಶಾಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ | 9 ಜಿಲ್ಲೆಗೆ ರೆಡ್ ಅಲರ್ಟ್.. IMD ಮುನ್ನೆಚ್ಚರಿಕೆ ಏನು?



















