ಮರ ಕಡಿಯುವಾಗ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಲಿಕೆಯಲ್ಲಿ ಗುತ್ತಿಗೆ ಅಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ಸಾವನ್ನಪ್ಪಿದ್ದಾರೆ. ರಾಜಪ್ಪ ಸಾವನ್ನಪ್ಪಿರುವ ಗುತ್ತಿಗೆದಾರ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಬಡ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಒಣಗಿದ ಮರ ಕಟಾವು ಮಾಡುತ್ತಿದ್ದ ಸಂದರ್ಭದಲ್ಲಿ ಅಯತಪ್ಪಿ ಬಿದ್ದು ರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.