ಹುಬ್ಬಳ್ಳಿ : ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗುಜರಾತ್ ಭವನದ ಸಮೀಪ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿ ಮಲ್ಲಪ್ಪ ಜೋಗಿನ್ (41) ಗುಂಡಿಯೊಳಗೆ ಇಳಿದು ಮಣ್ಣು ತೆಗೆಯುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದಿದೆ.
ಇತ್ತೀಚಿನ ಮಳೆಯಿಂದ ಮಣ್ಣು ನೆನೆದಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಮಣ್ಣಿನಡಿ ಸಿಲುಕಿದ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕಾಮಗಾರಿಯನ್ನು ಗುತ್ತಿಗೆದಾರ ಮಂಜುನಾಥ ಬೊಮ್ಮಶೆಟ್ಟಿ ನಡೆಸುತ್ತಿದ್ದು, ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸದೇ ಕಾಮಗಾರಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್!



















