ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.
ಆಕಾಶ್ (31) ಎಂಬ ಮೃತ ವ್ಯಕ್ತಿ. ಓವರ್ ಹೆಡ್ ಟ್ಯಾಂಕ್‍ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮೇಲೆ ನಿಂತು ಪೈಂಟ್ ಮಾಡುತ್ತಿದ್ದರು. ಈ ವೇಳೆ, ಕಬ್ಬಿಣದ ರಾಡ್ ಮುರಿದು ಟ್ಯಾಂಕ್ ಮೇಲಿನಿಂದ ಕೆಳಗೆ ಬಿದ್ದ ಪರಿಣಾಮ ಸ್ತಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















