ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ಭೀಕರ ಅಪಘಾತಕ್ಕೊಳಗಾದ ಘಟನೆ ನಡೆದಿದೆ.
ನಾಗರಾಜು ಎಂಬ ಕಾರ್ಮಿಕ ಪ್ರೆಸ್ ಮಷಿನ್‌ಗೆ ಸಿಲುಕಿ ಎಡಗೈನ ಮುಂಗೈ ಕಟ್ ಆಗಿದೆ. ಈ ಘಟನೆ ಪ್ರೆಸ್ ಟೂಲ್ಸ್ ಅಂಡ್ ಎಲೆಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಸಂಭವಿಸಿದೆ.
ಬಳಿಕ ಗಾಯಗೊಂಡ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಫ್ಯಾಕ್ಟರಿ ಮಾಲೀಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಪರಿಹಾರ ನೀಡಲು ಮಾಲೀಕರು ನಿರಾಕರಿಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ



















