“ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಅಧಿನಿಯಮ 2013 ಮತ್ತು ರಕ್ತದಾನ ಶಿಬಿರ, ಹಾಗೂ ಗರ್ಭಕೋಶ, ಸ್ತನ ಕ್ಯಾನ್ಸರ್ ಕುರಿತು ಆರೋಗ್ಯ ತಪಾಸಣಾ ಶಿಬಿರ“
ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಎಂ.ಎಸ್ ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸರ್ಕಾರಿ ಕಲಾ ಕಾಲೇಜು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಕಾರ್ಯಾಗಾರ ಮತ್ತು ಶಿಬಿರವನ್ನು ಆಯೋಜಿಸಲಾಗಿದೆ.
“ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013ರ ಬಗ್ಗೆ ಕಾರ್ಯಾಗಾರ ಹಾಗೂ ಗರ್ಭಕೋಶ, ಸ್ತನ ಕ್ಯಾನ್ಸರ್ ಕುರಿತು ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಗಾರ ಹಾಗೂ ಶಿಬಿರವು ಸರ್ಕಾರಿ ಕಲಾ ಮತ್ತು ವಿಜ್ಞಾ ಕಾಲೇಜು, ಕೆ.ಆರ್ ಸರ್ಕಲ್ ಬೆಂಗಳೂರಿನ ಬಾಪೂಕಿ ಸಭಾಂಗಣದಲ್ಲಿ ಶುಕ್ರವಾರ(26.09.2025) ರಂದು ಬೆಳಗ್ಗೆ 11 ರಿಂದ ಸಂಜೆ 3.30ರವರೆಗೆ ನಡೆಯಲಿದೆ ಎಂದು ತಿಳಿಸಿದೆ.



















