ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮೈಸೂರು ಮಹಾರಾಜರನ್ನು ಅವಹೇಳನ ಮಾಡಿಲ್ಲ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲ ಅವಧಿಗಿಂತ ಎರಡನೇ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಅದನ್ನು ಅಲ್ಲಿ ಹೇಳಿದ್ದಾರೆ ಅಷ್ಟೇ ವಿನಃ ಮೈಸೂರು ಮಹಾರಾಜರನ್ನು ನಿಂದಿಸಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರಸ್ತಾಪಿಸಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಆರ್. ಅಶೋಕ್ ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರು ಯಾವತ್ತೂ ನಿಜ ಹೇಳಲ್ಲ. ಬರೀ ಸುಳ್ಳೇ ಹೇಳುತ್ತಾರೆ. ಅಂಥವರಿಗೆ ಉತ್ತರ ಕೊಡುವುದಕ್ಕೆ ಆಗುತ್ತಾ ಎಂದಿದ್ದಾರೆ.
ಎಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ? ಅಲ್ಲಿ ದಲ್ಲಾಳಿಗಳ ಕಾಟ ಎನ್ನುವ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಸಚಿವ ಭೈರತಿ ಸುರೇಶ್ ತಿರುಗೇಟು ನೀಡಿದ್ದಾರೆ. ಹೌದು ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿಯವರೇ ದಲ್ಲಾಳಿಗಳು. ಯಾಕೆಂದರೆ ಅಪ್ಪ ಸಿಎಂ ಆಗಿದ್ದಾಗ ಅವರು ದಲ್ಲಾಳಿ ಕೆಲಸ ಮಾಡಿದ ಅನುಭವ ಇದೆ. ಯಾರು ದಲ್ಲಾಳಿಗಳು ಅಂತ ವಿಜಯೇಂದ್ರಗೆ ಚೆನ್ನಾಗಿ ಗೊತ್ತು ಎಂದು ಟಾಂಗ್ ಕೊಟ್ಟಿದ್ದಾರೆ



















