ಮೈಸೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಸಿದ್ದೇಶ್ವರ ಸಕ್ಕರೆ ಕಾರ್ಖಾನೆ ನಡೆಸಲು ಗ್ರೀನ್ ಸಿಗ್ನಲ್ ಸಿಕ್ಕ ಹಿನ್ನೆಲೆಯಲ್ಲಿ ತಾಯಿ ಸನ್ನಿಧಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಳೆದ ಒಂದು ವರ್ಷದಿಂದ ಪೊಲ್ಯೂಷನ್ ಕಂಟ್ರೋಲ್ ಬೋರ್ಡ್ ನಿಂದ ಕ್ಲಿಯರೆನ್ಸ್ ಸಿಗದ ಹಿನ್ನಲೆಯಲ್ಲಿ ಶಾಸಕರು ಕೋರ್ಟ್ ಮೆಟ್ಟಿಲೇರಿದ್ದರು.
ಸಕ್ಕರೆ ಕಾರ್ಖಾನೆ ತೆಗೆಯುವಂತೆ ಕೋರ್ಟ್ ಸೂಚಿಸಿದರೂ ಮಾಲಿನ್ಯ ನಿಯಂತ್ರಣ ಮಂಡಳಿ ಮಾತ್ರ ಅನುಮತಿ ನೀಡಿರಲಿಲ್ಲ. ಆದರೆ, ಈಗ ಎಲ್ಲಾ ಕ್ಲಿಯರೆನ್ಸ್ ಸಿಕ್ಕಿದೆ. ಹೀಗಾಗಿ ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಒಂದು ಲಕ್ಷ ರೂ. ಕಾಣಿಕೆ ನೀಡಿದ್ದಾರೆ.
ಪೂಜೆಯ ನಂತರ ಮೈಸೂರಿನಿಂದ ಚಿಂಚೋಳಿಯ ಸಿದ್ದೇಶ್ವರ ಸಕ್ಕರೆ ಕಾರ್ಖಾನೆಗೆ ಯತ್ನಾಳ್ ತೆರಳಿದರು. ಸಿದ್ದೇಶ್ವರ ಸರ್ಕಾರ ಕಾರ್ಖಾನೆಯು ಸಕ್ಕರೆ ಮತ್ತು ಎಥನಾಲ್ ಉತ್ಪಾದನೆ ಹೊಂದಿದೆ. ದೇವಸ್ಥಾನದಲ್ಲಿ ಸಕ್ಕರೆ ಕಾರ್ಖಾನೆ ಫೈಲ್ ಇಟ್ಟು ಯತ್ನಾಳ್ ಪೂಜೆ ಸಲ್ಲಿಸಿದ್ದಾರೆ.