ವಿಜಯಪುರ: ನೋಟಿಸ್ ಗೆ ಸಮರ್ಪಕ ಉತ್ತರ ನೀಡಿಲ್ಲ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಇದರ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಬಿಜೆಪಿಯ ಕೆಲವು ಕಾರ್ಯಕರ್ತರು ಮಾಜಿ ಪಾಲಿಕೆ ಸದಸ್ಯ ಉಮೇಶ ವಂದಾಲ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ. ನಗರದ ಶಾಹುನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.