ವಿಜಯಪುರ: ಬಿಜೆಪಿ ಹೈಕಮಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಈ ಮಧ್ಯೆ ಯತ್ನಾಳ್ ಬೆಂಬಲಿಗರು ರಾಜೀನಾಮೆ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ. ಪಕ್ಷದಲ್ಲಿನ ತಮ್ಮ ಸ್ಥಾನಗಳಿಗೆ ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ ನೀಡುತ್ತಿದ್ದಾರೆ. ಒಬಿಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಮಂಡಳ ಅಧ್ಯಕ್ಷ ಹೂಗಾರ್ ಅವರಿಗೆ ವಾಟ್ಸಾಪ್ ಮೂಲಕ ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಇನ್ನೊಂದೆಡೆ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟನೆ ಮಾಡುತ್ತಿದ್ದಂತೆ ನಗರದ ಜೋರಾಪುರ ಪೇಟೆಯಲ್ಲಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದ್ದಾರೆ.