ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ಹೇಳಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ಫಲಿಸಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪರ ಬೆನ್ನು ಬಿಡುತ್ತಿಲ್ಲ. ಆದರೆ, ಅವರು ಎದೆಗುಂದದೆ ಜಯಿಸಿದ್ದಾರೆ. ಯಡಿಯೂರಪ್ಪ ವಿಚಾರಣೆಗಳಿಗೆ ಬೆನ್ನು ತೋರಿಸಿದವರಲ್ಲ. ಇದು ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನದಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ರವಿಕುಮಾರ್, ಯಡಿಯೂರಪ್ಪ ಅವರಿಗೆ 82 ವರ್ಷವಾಗಿದ್ದು, ಅವರು ಓಡಿ ಹೋಗುವ ವ್ಯಕ್ತಿ ಅಲ್ಲ. ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ದೊಡ್ಡ ಜನನಾಯಕ ಅವರು. ಅವರ ಇತಿಹಾಸ ಗಮನಿಸಿ ನ್ಯಾಯಾಲಯ ಈ ಆದೇಶ ನೀಡಿದೆ ಎಂದು ಹೇಳಿದ್ದಾರೆ.
