ಶಿವಮೊಗ್ಗ: ಪ್ರಯಾಗ್ ರಾಜ್ ಗೆ ಹೋಗಿದ್ದ ಪ್ರವಾಸಿಗರು ದಾರಿ ಮಧ್ಯೆ ರೈಲಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರ 81ನೇ ಜನ್ಮದಿನದ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಪ್ರಯಾಗ್ ರಾಜ್ ಗೆ ತೆರಳಿದ್ದ ವಿಶೇಷ ರೈಲಿನಲ್ಲಿದ್ದ ಪ್ರಯಾಣಿಕರು ರೈಲಿನಲ್ಲೇ ಹುಟ್ಟು ಹಬ್ಬ ಆಚರಿಸಿದ್ದಾರೆ.
ಪ್ರಯಾಗ್ ರಾಜ್ ನಿಂದ ಮರಳಿ ಬರುತ್ತಿದ್ದ ವೇಳೆ ಹುಟ್ಟು ಹಬ್ಬ ಆಚರಿಸಿದ್ದಾರೆ. ಚಿತ್ರದುರ್ಗದ ರೈಲು ನಿಲ್ದಾಣದಲ್ಲಿ ಜನ್ಮದಿನದ ಹಿನ್ನೆಲೆಯಲ್ಲಿ ಬಿಎಸ್ ವೈ ಅಭಿಮಾನಿಗಳು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ವೇಳೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಶಿವಮೊಗ್ಗ ನಗರ ಕಾರ್ಯದರ್ಶಿ ಮಾಲತೇಶ್ ಹಾಗೂ ಭದ್ರಾವತಿಯ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾಜಿ ಸಿಎಂ ಪರ ಘೋಷಣೆ ಕೂಗಲಾಯಿತು.