ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ತಡ ಮಾಡಿದ್ದಕ್ಕೆ ಲೋಕಾಯುಕ್ತ ಕಚೇರಿ ಹಾಗೂ ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ದೂರು ನೀಡಿದ್ದರು. ಆದರೆ, ರಾಜ್ಯಪಾಲರು ತನಿಖೆಗೆ ವಿಳಂಬ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನರಸಿಂಹಮೂರ್ತಿ ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ರಾಜ್ಯಪಾಲರು, ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.
2022ರಿಂದ ಪ್ರಾಸಿಕ್ಯೂಷನ್ ಅನುಮತಿ ಸಿಕ್ಕಿಲ್ಲ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಧೀರ್ಘ ಕಾಲದವರೆಗೆ ವಿಳಂಬ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಲೋಕಾಯುಕ್ತ ಹಾಗೂ ರಾಜ್ಯಪಾಲರ ಕಚೇರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.