ಕಾಂಗ್ರೆಸ್ ವಿರುದ್ಧದ ಬಿಜೆಪಿ ಪ್ರತಿಭಟನೆಯಲ್ಲಿ ಬಿ.ಎಸ್. ಯಡಿಯೂರಪ್ಪ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಪುನರಾಯ್ಕೆಯ ನಿರೀಕ್ಷೆಯಲ್ಲಿದ್ದಾರೆ.
ವಿಜಯೇಂದ್ರ ಅವರ ಈ ಅವಧಿಯಲ್ಲಿ ಪಕ್ಷದಲ್ಲಿ ಅಸಮಾಧಾನ, ಬಂಡಾಯ ಮತ್ತು ಬಣ ಬಡಿದಾಟ ಹೆಚ್ಚಾಗಿದೆ. ಬಂಡಾಯ ನಾಯಕರು ಅಧ್ಯಕ್ಷರ ವಿರುದ್ಧವೇ ಸಮರ ಸಾರಿ ಪಕ್ಷದ ವಿರುದ್ಧ ಹೋರಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬಣ ಬಡಿದಾಟ ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಎಂದು ಯಡಿಯೂರಪ್ಪ ಸಂದೇಶ ನೀಡಿದ್ದಾರೆ. ಎನ್ಡಿಎ ಅಧಿಕಾರಕ್ಕೆ ಬರಲು ಒಗ್ಗಟ್ಟಾಗಿ ಹೋರಾಡಿ ಎಂದು ಅವರು ತಿಳಿಸಿದ್ದಾರೆ. ಇದೇ ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮಗೊಳ್ಳುವ ಸಾಧ್ಯತೆಯಿದೆ.


















