ಬೆಂಗಳೂರು : ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದನ್ನು ಬಿ ರಿಪೋರ್ಟ್ ಮಾಡಲು ₹2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ.
ಕಾನ್‌ಸ್ಟೇಬಲ್ ಪರಶುರಾಮ್ ಹಾಗೂ ಇನ್ಸ್‌ಪೆಕ್ಟರ್ ರಾಘವೇಂದ್ರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪ್ರಕರಣವನ್ನು ಕ್ಲೋಸ್ ಮಾಡಿ ಕೊಡಲು ಹಣ ಕೇಳಿದ್ದ ಆರೋಪವೂ ಇದೆ.
ಈಗಾಗಲೇ ಹೆಡ್‌ಕಾನ್‌ಸ್ಟೇಬಲ್ ಪರಶುರಾಮ್ ₹1.80 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಉಳಿದ ₹20 ಸಾವಿರ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಲು ಮುಂದಾಗಿದ್ದರು.
ಆದರೆ ಲೋಕಾಯುಕ್ತ ಟ್ರ್ಯಾಪ್ ವಿಚಾರ ತಿಳಿಯುತ್ತಿದ್ದಂತೆ ಇನ್ಸ್‌ಪೆಕ್ಟರ್ ರಾಘವೇಂದ್ರ ಹಾಗೂ ಹೆಡ್‌ಕಾನ್‌ಸ್ಟೇಬಲ್ ಪರಶುರಾಮ್ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ಸದ್ಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!



















