ಡಿಸೆಂಬರ್ 11ರಂದು ಅಂದರೆ ಗುರುವಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆ ಆಗುತ್ತಿರುವುದು ತಿಳಿದೇ ಇದೆ. ಇದರಿಂದ ಅಭಿಮಾನಿಗಳಲ್ಲಿ ಸಂಭ್ರಮವೋ ಸಂಭ್ರಮ. ಸಿನಿಮಾ ಬಿಡುಗಡೆಗೂ ಮೊದಲು ದರ್ಶನ್ ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಇದನ್ನು ವಿಜಯಲಕ್ಷ್ಮೀ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದಿ ಡೆವಿಲ್ ಸಿನಿಮಾ ರೀಲಿಸ್ಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ನಟ ದರ್ಶನ್ ಪ್ರೀತಿಯ ಪತ್ರವೊಂದನ್ನು ಬರೆದಿದ್ದಾರೆ. ನಾನು ಈ ಸಂದೇಶವನ್ನ ನನ್ನ ಹೃದಯದಿಂದ ನೀಡುತ್ತಿದ್ದೇನೆ. ನಿಮ್ಮ ಪ್ರೀತಿ,ನಿಮ್ಮ ಬೆಂಬಲ,ಚಿತ್ರಕ್ಕೆ ನೀವು ನೀಡುತ್ತಿರುವ ಬಿಡುವಿಲ್ಲದ ಪ್ರಚಾರ ನಾನು ದೂರವಿದ್ದರು ನೀವೆಲ್ಲ ನನ್ನ ಜೊತೆಗೆ ಇರುವ ಧೈರ್ಯ ನೀಡಿದೆ ಅಂತ ಬರೆದಿದ್ದಾರೆ.
‘ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ. ಈ ಸಮಯದಲ್ಲಿ ನಾನು ಬಯಸುವುದು ಒಂದೇ . ನಮ್ಮ ಡೆವಿಲ್ ಸಿನಿಮಾ ಕಡೆಗೆ ಗಮನ ಹರಿಸಬೇಕು. ನನಗೆ ತೋರಿಸಿದ ಪ್ರೀತಿಯನ್ನು ಡೆವಿಲ್ಗೂ ತೋರಿಸಿ. ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಪದಗಳಿಂದಲ್ಲ, ಆದರೆ ಈ ಚಿತ್ರದ ಅದ್ಭುತ ಯಶಸ್ಸಿನೊಂದಿಗೆ’ ಎಂದಿದ್ದಾರೆ ದರ್ಶನ್.
ಇದನ್ನೂ ಓದಿ : ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು



















