ದಕ್ಷಿಣ ಕನ್ನಡ: ಕಾಸ್ಮೆಟಿಕ್ ಸರ್ಜರಿ ಸಂದರ್ಭದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿ ಈ ಘಟನೆ ನಡೆದಿದೆ. ಮೊಹ್ಮದ್ ಮಾಝಿನ್(32) ಸಾವನ್ನಪ್ಪಿದ ದುರ್ದೈವಿ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್ ನ ಎದೆಯಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿದೆ. ಹೀಗಾಗಿ ಅದನ್ನು ತೆಗೆಸಲು ಬೆಂದೂರ್ ವೆಲ್ ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್ ಗೆ ತೆರಳಿದ್ದ.
ಆದರೆ, ವೈದ್ಯರು ಮಾತ್ರ ಅರ್ಧ ಗಂಟೆಯಲ್ಲಿ ಮುಗಿಯಬೇಕಿದ್ದ ಶಸ್ತ್ರಚಿಕಿತ್ಸೆಯನ್ನು ಸಂಜೆಯವರೆಗೂ ಮಾಡಿದ್ದಾರೆ. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಮಾಝಿನ್ ಸಾವನ್ನಪ್ಪಿರುವ ಕುರಿತು ಹೇಳಿದ್ದಾರೆ.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೊಲೀಸರು, ವೈದ್ಯರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಸ್ಮೆಟಿಕ್ ಸರ್ಜರಿಯನ್ನು ಶಸ್ತ್ರಚಿಕಿತ್ಸಾ ಮತ್ತು ವೈದ್ಯಕೀಯ ತಂತ್ರಗಳ ಮೂಲಕ ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುವುದಾಗಿದೆ. ಈಗ ಇದಕ್ಕೆ ಯುವಕ ಬಲಿಯಾಗಿದ್ದಾನೆ.