ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಹೃದಯಾಘಾತ ಪ್ರಕರಣ ವರದಿಯಾಗಿದೆ.
22 ವರ್ಷದ ಯುವಕ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮನೆಯಲ್ಲಿದ್ದ ವೇಳೆ ಯುವಕ ಇದ್ದಕ್ಕಿದ್ದಂತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.
ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಬಲಿಯಾಗಿರುವ ಯುವಕ ಎನ್ನಲಾಗಿದೆ. ದಾವಣಗೆರೆ ನಗರದಲ್ಲಿನ ಜಯನಗರದ ಮನೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ಸಾಗಿಸಿದ ಕೆಲವೇ ಕ್ಷಣಗಳಲ್ಲಿ ಯುವಕ ಸಾವನ್ನಪ್ಪಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

















