ಬೆಂಗಳೂರಿನ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ‘ದಕ್ಷಿಣ ಉಪಹಾರ’ ಹೋಟೆಲ್‌ನಲ್ಲಿ ಸಂಭವಿಸಿದ ಲಿಫ್ಟ್ ದುರಂತದಲ್ಲಿ ದಾರವಾಡ ಮೂಲದ 22 ವರ್ಷದ ರಾಜೇಶ್ ಎಂಬವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ.
ಸರಕು ಸಾಗಿಸಲು ಬಳಸುವ ಲಿಫ್ಟ್‌ನಲ್ಲಿ ಎರಡನೇ ಮಹಡಿಗೆ ತೆರಳುತ್ತಿದ್ದ ವೇಳೆ ರಾಜೇಶ್ ಅವರ ಕುತ್ತಿಗೆ ಲಿಫ್ಟ್‌ನ ಹೊರಭಾಗಕ್ಕೆ ಬಂದಿದ್ದು, ಸಜ್ಜೆಗೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಫ್ಟ್‌ನಲ್ಲಿ ಸಂಭವಿಸಿದ ದುರಂತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ : ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!


















