ಚಿಕ್ಕಬಳ್ಳಾಪುರ: ಕಬಾಬ್ ತರಲು ಮನೆಯಿಂದ ಹೊರಗೆ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೈಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಪಕ್ಕದ ನಾರಾಯಣಪುರ ಗ್ರಾಮದ ನಿವಾಸಿ ವಿನಾಯಕ (23) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ನಾರಾಯಣಪುರದಿಂದ ವಿನಾಯಕ ಮೈಲಾಪುರಕ್ಕೆ ಕಬಾಬ್ ತರಲು ಹೋಗಿದ್ದ ಎನ್ನಲಾಗಿದೆ. ಆದರೆ, ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕೃಷಿ ಹೊಂಡದ ಹತ್ತಿರ ಮೊಬೈಲ್, ಬೈಕ್, ಚಪ್ಪಲಿ ಪತ್ತೆ ಆಗಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಯುವಕನ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗುತ್ತಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.