ಬಳ್ಳಾರಿ: ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ. ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಸಾವನ್ನಪಿರುವ ಯುವಕ ಎನ್ನಲಾಗಿದೆ. ಗ್ರಾಮದಲ್ಲಿ ಶುಕ್ರವಾರ ಗುಡುಗು- ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಆಗ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮನೆಯ ಗೋಡೆ ಕೂಡ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.