ಹೈದರಾಬಾದ್: ಬ್ಯಾಡ್ಮಿಂಟನ್ ಆಡುವಾಗಲೇ ವ್ಯಕ್ತಿಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ.
ಹೈದರಾಬಾದ್‌ನ ನಾಗೋಲೆ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ವಿಡಿಯೋವೊಂದು ವೈರಲ್ ಆಗಿದೆ.
ಬ್ಯಾಡ್ಮಿಂಟನ್ ಆಡುತ್ತಿದ್ದಾಗಲೇ ಗುಂಡ್ಲಾ ರಾಕೇಶ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಕೇಶ್ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾವನ್ನಪ್ಪಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.