ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದಾಗಿ ಯುವಕನ ಕಾಲು ಮುರಿದಿರುವ ಘಟನೆ ನಡೆದಿದೆ.
ರಕ್ಷಕ್ ಬೆಳಗ್ಗೆ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ವೇಣುಗೋಪಾಲ ಎಂಬ ಯುವಕ ಕಾಲು ಮುರಿದುಕೊಂಡಿದ್ದಾನೆ.
ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತವಾಗಿತ್ತು. ಮಾನ್ಯತಾ ಟೆಕ್‌ಪಾರ್ಕ್‌ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಈ ಘಟನೆ ನಡೆದಿದೆ. ಆಕ್ಸಿಡೆಂಟ್ ಆದ ನಂತರ ಟ್ಯಾಕ್ಸಿಯಲ್ಲಿ ಹೆಬ್ಬಾಳ ಬಳಿಯ ಖಾಸಗಿ ಆಸ್ಪತ್ರೆಗೆ ಯುವಕ ದಾಖಲಾಗಿದ್ದಾನೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















