ಮೈಸೂರು: ಥೈಲ್ಯಾಂಡ್ ನಿಂದ ಯುವತಿ ಕರೆ ತಂದು ವೇಶ್ಯಾವಾಟಿಕೆಗೆ ದೂಡಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮೈಸೂರಿನಲ್ಲಿ (Mysore) ನಡೆದಿದೆ. ರತನ್ ಬಂಧಿತ ಆರೋಪಿ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವನನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರತನ್ ಈ ಹಿಂದೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಆದರೆ, ಅದನ್ನು ಬಿಟ್ಟು ಇಂತಹ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಥೈಲ್ಯಾಂಡ್ ನಿಂದ ಯುವತಿಯನ್ನು ಕರೆ ತಂದು ನಗರದಲ್ಲಿ ದಂಧೆ ನಡೆಸುತ್ತಿದ್ದ. ಈತನಿಗೆ ರೇವಣ್ಣ ಎಂಬಾತ ಸಾಥ್ ನೀಡಿದ್ದ ಎನ್ನಲಾಗಿದೆ. ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ವಸೂಲಿ ಮಾಡುತ್ತಿದ್ದನು.
ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿರುವ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಿಸಿ, ರತನ್ ಸೇರಿದಂತೆ 7 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಯುವತಿಯನ್ನು ಪ್ರಶ್ನಿಸಿದಾಗ ನಾನು ಬ್ಯೂಸಿನೆಸ್ ವಿಷಯವಾಗಿ ಒಂದು ದಿನದ ಹಿಂದೆ ಮೈಸೂರಿಗೆ ಆಗಮಿಸಿರುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.