ಹಾವೇರಿ: ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಯುವತಿ ಶಿಲ್ಪಾ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಬೆಳಗಾವಿಯಲ್ಲಿ ಬಿಸಿಎ ವಿಧ್ಯಾಭ್ಯಾಸ ಮಾಡುತ್ತಿದ್ದ ತಾನಿದ್ದ ಹಾಸ್ಟೆಲ್ನಲ್ಲಿಯೇ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಾರಂಭದಲ್ಲಿ ಶಿಲ್ಲಾ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಆದರೆ ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಈಗ ಬಯಲಾಗಿದೆ. ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಶಿಲ್ಪಾ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಅಂಗಡಿ ಮಾಲೀಕ ಆತನ ಮೇಲೆ ಕಳ್ಳತನದ ಆರೋಪ ಹೊರಿಸಿದ್ದ. ಆ ವೇಳೆ ಆತನ ಮೊಬೈಲ್ ಕಿತ್ತುಕೊಂಡಿದ್ದ. ಮೊಬೈಲ್ ನೋಡಿದಾಗ ನವೀನ್ ಶಿಲ್ಪಾ ಜೊತೆ ಚಾಟಿಂಗ್ ಮಾಡಿರೋದು ಗೊತ್ತಾಗಿದೆ. ನವೀನ್ ಮೊಬೈಲ್ನಲ್ಲಿದ್ದ ಶಿಲ್ಪಾ ನಂಬರ್ ತೆಗೆದುಕೊಂಡು ರಂಜಾನ್, ಆಕೆಗೆ ಕರೆ ಮಾಡಿ ಟಾರ್ಚರ್ ಮಾಡಿದ್ದ. ನವೀನ್ ನಿನಗೆ ದುಡ್ಡು ಕಳಿಸಿದ್ದಾನೆ. ನಿಮಗೆ ದುಡ್ಡು ಎಲ್ಲಿಂದ ಬಂತು? ನಮ್ಮ ಫರ್ನಿಚರ್ ಅಂಗಡಿಯಲ್ಲಿ ಕಳ್ಳತನ ಮಾಡಿ ನವೀನ್ ನಿನಗೆ ಹಣ ಕಳಿಸಿದ್ದಾನೆ ಎಂದು ಬ್ಲ್ಯಾಕ್ ಮೇಲೆ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂಬ ಆರೋಪ ಕೇಳಿ ಬಂದಿದೆ.