ಕೋಲಾರ : ತೆರೆದಿದ್ದ ಮ್ಯಾನ್ ಹೋಲ್ ಗೆ ಯುವತಿಯೋರ್ವರು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ನಗರದ ಬ್ರಾಹ್ಮರ ಬೀದಿಯಲ್ಲಿ ನಡೆದಿದೆ.
ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಯುವತಿ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಸ್ಥಳೀಯರು ನಗರಸಭೆ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.