ಮೈಸೂರು : ಮಸೀದಿ ಒಳಗಡೆ ಯುಕನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಮೈಸೂರು ನಗರದ ಎಸ್.ಎಸ್ ನಗರ ಪ್ರದೇಶದ ಅಫ್ನಾ ಘರ್ ಮಸೀದಿಯಲ್ಲಿ ಈ ಘಟನೆ ನಡೆದಿದೆ.
ಮೊಹಮದ್ ಅಯಾನ್ ಖಾನ್ ಎಂಬ ಯುವಕನಿಗೆ ಪರ್ವೆಜ್ ಹಾಗೂ ಅವೇಜ್ ಸೇರಿದಂತೆ ಇತರರು ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಅಬ್ರಾರ್ ಖಾನ್ ಅವರು ನನ್ನ ಮಗನಿಗೆ ಹಲ್ಲೆ ಮಾಡಿ ಬೈದಿದ್ದಾರೆ ಎಂದು ದೂರು ನೀಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ದೂರು ದಾಖಲಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕಾರಿನ ಬಾಡಿಗೆ ನೀಡಲು ಲಂಚಕ್ಕೆ ಬೇಡಿಕೆ | KAS ಅಧಿಕಾರಿ ಸೇರಿ ಇಬ್ಬರು ಲೋಕಾ ಬಲೆಗೆ



















