ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿ ಯುವಕನೊಬ್ಬನ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾಂಡೇಲಿ ನಿವಾಸಿ ಇಮ್ಯಾನುವೆಲ್ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದು, ಘಟನೆಯ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮದ್ಯದ ಅಮಲಿನಲ್ಲಿ ಅಶೋಕ್, ಪೈರೋಜ್ ಹಾಗೂ ಆಸಿಪ್ ಎಂಬ ಮೂವರು ಇಮ್ಯಾನುವೆಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಲ್ಲಿ ಗಾಯಗೊಂಡ ಇಮ್ಯಾನುವೆಲ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಘಟನೆಯ ಕುರಿತು ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡ ದಾಂಡೇಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲ್ಲೆ ನಡೆಸಿದ ಆರೋಪಿಗಳಾದ ಅಶೋಕ್, ಪೈರೋಜ್ ಹಾಗೂ ಆಸಿಪ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೆ ನಿಖರ ಕಾರಣ ಏನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!



















