ಚಿಕ್ಕಮಗಳೂರು: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭದ್ರಾ ನದಿಗೆ ಪಿಕಪ್ ಬಿದ್ದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳಸ (Kalasa) ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಗಣಪತಿಕಟ್ಟೆ ನಿವಾಸಿ ಶಮಂತ್ (23) ಮೃತ ದುರ್ದೈವಿ. ಭದ್ರಾ ನದಿಯ (Bhadra River) ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಿಕಪ್ ಸಮೇತ ನದಿಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ಮರಳಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.