ಹಾಸನ: ಪೊಲೀಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
112 ಪೊಲೀಸ್ ವಾಹನ ಬೈಕ್ (Bike) ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಈ ಘಟನೆ ಹಾಸನದ (Hassan) ಬಿ.ಎಂ ರಸ್ತೆಯಲ್ಲಿ ನಡೆದಿದೆ.
ಶಶಾಂಕ್ (21) ಸಾವನ್ನಪ್ಪಿರುವ ಯುವಕ ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಶಾಂಕ್ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಎಸ್ಸಿ ಓದುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















